Asianet Suvarna News Asianet Suvarna News

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಚಿಕ್ಕಬಳ್ಳಾಪುರದಿಂದ ರಕ್ಷಾ ರಾಮಯ್ಯಗೆ ಟಿಕೆಟ್, ಕೋಲಾರ ಬಾಕಿ!

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.  ಕರ್ನಾಟಕದ 3 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದ್ದು, ಕೋಲಾರ ಬಾಕಿ ಉಳಿಸಿಕೊಳ್ಳಲಾಗಿದೆ. 
 

Congress Announces 5 more candidates for Lok Sabha Election 2024 include 2 seat from Karnataka ckm
Author
First Published Mar 29, 2024, 9:45 PM IST

ನವದೆಹಲಿ(ಮಾ.29) ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 9ನೇ ಪಟ್ಟಿ ಪ್ರಕಟಗೊಂಡಿದೆ. ಈ ಪೈಕಿ ಕರ್ನಾಟಕದ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ ಕೋಲಾರದಲ್ಲಿ ಗೊಂದಲ ಮುಂದುವರಿದ ಕಾರಣ ಬಾಕಿ ಉಳಿಸಿಕೊಳ್ಳಲಾಗಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. ಇದರ ಜೊತೆಗೆ ರಾಜಸ್ಥಾನದ 2 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ.  

ಚಾಮರಾಜನಗರದಿಂದ ಸುನಿಲ್ ಬೋಸ್‌ಗೆ ಟಿಕೆಟ್ ನೀಡಲಾಗಿದೆ. ಡಿಕೆ ಶಿವಕುಮಾರ್ ಆಪ್ತ ರಕ್ಷಾ ರಾಮಯ್ಯಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇತ್ತ ಬಳ್ಳಾರಿಯಿಂದ ಇ ತುಕರಾಂ ಟಿಕೆಟ್ ಗಿಟ್ಟಿಸಿಕೊಂಡಿದ್ದರೆ. ಆದರೆ ಕೋಲಾರ ಕ್ಷೇತ್ರದ ಟಿಕೆಟ್ ಗೊಂದಲ ಇನ್ನೂ ಬಗೆ ಹರಿದಿಲ್ಲ. ಮುನಿಯಪ್ಪ ಮುನಿಸಿಕೊಂಡಿದ್ದಾರೆ, ಇತ್ತ ರಮೇಶ್ ಕುಮಾರ್ ಬಣದ ನಾಯಕರು ರಾಜೀನಾಮೆ ಮಾತುಗಳನ್ನಾಡಿದ್ದಾರೆ. ಹೀಗಾಗಿ ಕೋಲಾರ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡಿಲ್ಲ. 

ನಮ್ಮ ಸ್ನೇಹಿತರು 2 ಬಾರಿ ಸಿಎಂ ಆದವರು, ಮಂಡ್ಯ ಜನರಿಗೆ ಹೇಗೆ ಸಿಗ್ತಾರೆ?: ಸಚಿವ ಚಲುವರಾಯಸ್ವಾಮಿ ಟೀಕೆ

ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಿರುವ ಸಿಎಂ ಸಿದ್ದರಾಮಯ್ಯ ಈ ಎರಡು ಕ್ಷೇತ್ರ ಗೆಲ್ಲಲು ರಣತಂತ್ರ ರೂಪಿಸಿದ್ದಾರೆ. ಚಾಮರಾಜನಗರದಲ್ಲಿ ತಮ್ಮ ಆಪ್ತ ಸಚಿವ ಮಹಾದೇವಪ್ಪನವರ ಪುತ್ರ ಸುನಿಲ್ ಬೋಸ್‌ಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಮೈಸೂರು ಹಾಗೂ ಚಾಮಾರಾಜನಗರ ಎರಡೂ ಕ್ಷೇತ್ರ ಗೆಲ್ಲಿಸಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಸಜ್ಜಾಗಿದ್ದಾರೆ. 

ಕಾಂಗ್ರೆಸ್ ಲೋಕಸಭಾ ಚುನಾವಣಾ ಟಿಕೆಟ್
ಚಾಮರಾಜನಗರ- ಸುನೀಲ್ ಬೋಸ್
ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ
ಬಳ್ಳಾರಿ - ಇ ತುಕಾರಾಂ

ರಾಜಸ್ಥಾನದ ಎರಡು ಕ್ಷೇತ್ರಕ್ಕೆ ಟಿಕೆಟ್ ಘೋಷಿಸಲಾಗಿದೆ.ರಾಜಸಮಂದ್ ಕ್ಷೇತ್ರದಿಂದ ಡಾ.ದಾಮೋದರ್ ಗುರ್ಜರ್, ಬಿಲ್ವಾರ ಕ್ಷೇತ್ರದಿಂದ ಡಾ.ಸಿಪಿ ಜೋಶಿಗೆ ಟಿಕೆಟ್ ನೀಡಲಾಗಿದೆ.

ಬಾಗಲಕೋಟೆ ವೀಣಾ ಕಾಶಪ್ಪನವರ ಬಂಡಾಯ; ಕಾಂಗ್ರೆಸ್‌ ವಿರುದ್ಧ ಸ್ಪರ್ಧೆಗೆ 2 ದಿನದಲ್ಲಿ ತೀರ್ಮಾನ

ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಕೆಲ ರಾಜ್ಯದಲ್ಲಿನ ಸೀಟು ಹಂಚಿಕೆ ಕೂಡ ಅಂತಿಮಗೊಂಡಿದೆ. ಆದರೆ ಕರ್ನಾಟಕದ ಕೋಲಾರದ ಕಗ್ಗಂಟು ಬಗೆಹರಿಯದ ಕಾರಣ ಟಿಕೆಟ್ ಘೋಷಣೆಯಾಗಿಲ್ಲ.  ಪೈಪೋಟಿಗೆ ಬಿದ್ದಿರುವ ಸ್ಪೀಕರ್‌ ರಮೇಶ್ ಕುಮಾರ್‌ ಬಣ ಹಾಗೂ ಮುನಿಯಪ್ಪ ಕುಟುಂಬದ ನಡುವೆ ಹೊಂದಾಣಿಕೆ ಮೂಡಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ನಾಯಕತ್ವವು, ಈ ಎರಡೂ ಬಣಗಳು ಸೂಚಿಸುತ್ತಿರುವ ಅಭ್ಯರ್ಥಿಗಳಿಗೆ ಕೊಕ್ ನೀಡಿ, ದಲಿತ ಎಡಗೈ ಸಮುದಾಯಕ್ಕೆ ಸೇರಿದ ನ್ಯೂಟ್ರಲ್‌ ಅಭ್ಯರ್ಥಿ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡುವ ಕಠಿಣ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

Follow Us:
Download App:
  • android
  • ios