Asianet Suvarna News Asianet Suvarna News

ಲೋಕಸಭಾ ಚುನಾವಣೆ 2024;ಅನಂತ್‌ನಾಗ್-ರಜೌರಿ ಕ್ಷೇತ್ರದಲ್ಲಿ ಮತದಾನ ಮುಂದೂಡಿದ ಆಯೋಗ!

ಲೋಕಸಭಾ ಚುನಾವಣೆ ಅಬ್ಬರ ಜೋರಾಗಿದೆ. ಎರಡು ಹಂತದ ಮತದಾನ ಪ್ರಕ್ರಿಯೆ ಮುಗಿದಿದೆ.3ನೇ ಹಂತದ ಮತದಾನಕ್ಕೆ ತಯಾರಿ ನಡುವೆ ದಿಢೀರ್ ಒಂದು ಕ್ಷೇತ್ರದ ಮತದಾನವನ್ನು ಮುಂದೂಡಲಾಗಿದೆ.

Lok Sabha Election 2024 Anantnag Rajouri constituency polling rescheduled voting on may 25th ckm
Author
First Published Apr 30, 2024, 9:50 PM IST

ನವದೆಹಲಿ(ಏ.30) ಲೋಕಸಭಾ ಚುನಾವಣೆಯಲ್ಲಿ ಕೆಲ ಮತಗಟ್ಟೆಗಳಲ್ಲಿ ಜಟಾಪಟಿ ನಡೆದ ಕಾರಣ ಮರು ಮತಾದನ ನಡೆಸಲಾಗಿದೆ. ಈ ಪೈಕಿ ಚಾಮರಾಜನಗರ 146ನೇ ಮತಗಟ್ಟೆಯಲ್ಲಿ ಮರುಮತದಾನ ನಡೆದಿದೆ. ಇದೀಗ 3ನೇ ಹಂತದ ಮತದಾನಕ್ಕೆ ಸಜ್ಜಾಗಿದ್ದ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ - ರಜೌರಿ ಕ್ಷೇತ್ರದಲ್ಲಿನ ಮತದಾನವನ್ನು ಕೇಂದ್ರ ಚುನಾವಣಾ ಆಯೋಗ ಮುಂದೂಡಿದೆ. ಮೇ.7 ರಂದು ನಡೆಯಬೇಕಿದ್ದ ಮತದಾನವನ್ನು ಇದೀಗ ಮೇ.25ಕ್ಕೆ ಮುಂದೂಡಲಾಗಿದೆ.

ಜಮ್ಮ ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಪೈಕಿ ಅನಂತನಾಗ್ - ರಜೌರಿ ಕ್ಷೇತ್ರದಲ್ಲಿ ಭಾರಿ ಪ್ರವಾಹವೇ ಬಂದಿದೆ. ಇದರಿಂದ ರಸ್ತೆಗಳು ಕೊಚ್ಚಿ ಹೋಗಿದೆ. ಪರಿಸ್ಥಿತಿ ಗಂಭೀರವಾಗಿದೆ. ಇದರ ನಡುವೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿಯನ್ನು ಮಾಡಿತ್ತು. ನ್ಯಾಯಸಮ್ಮತ ಚುನಾವಣೆ ದೃಷ್ಟಿಯಿಂದ ಮತದಾನ ದಿನಾಂಕ ಮುಂದೂಡುವಂತೆ ಮನವಿ ಮಾಡಿತ್ತು. ಹಲವು ಗ್ರಾಮಗಳು ಸಂಪರ್ಕ ಕಡಿದುಕೊಂಡಿದೆ. ಜನ ಜೀನವ ಅಸ್ತವ್ಯಸ್ತಗೊಂಡಿದೆ. ಹೀಗಾಗಿ ಮತದಾನ ಮುಂದೂಡುವಂತೆ ಮನವಿ ಮಾಡಲಾಗಿತ್ತು.

ನೋಟಾಗೇ ಗರಿಷ್ಠ ಮತ ಬಂದರೆ ಮುಂದೇನು? ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ಮನವಿಗೆ ಸ್ಪಂದಿಸಿದ ಕೇಂದ್ರ ಚುನಾವಣಾ ಆಯೋಗ, ಇದೀಗ ಅನಂತನಾಗ್ - ರಜೌರಿ ಕ್ಷೇತ್ರದ ಮತದಾನ ದಿನಾಂಕವನ್ನು ಮೇ7ರಿಂದ ಮೇ25ಕ್ಕೆ ಮುಂದೂಡಲಾಗಿದೆ. ಮೂರನೇ ಹಂತದಲ್ಲಿ ಮತದಾನ ನಡಯೆಬೇಕಿದ್ದ ಈ ಎರಡೂ ಕ್ಷೇತ್ರದಲ್ಲಿ 6ನೇ ಹಂತದಲ್ಲಿ ಮತದಾನ ನಡೆಯಲಿದೆ. ಭಾರಿ ಮಳೆಯಿಂದ ರಸ್ತೆಗಳು ಕೊಚ್ಚಿ ಹೋಗಿದೆ. ಇದೇ ವೇಳೆ ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಸಾಧ್ಯವಾಗುತ್ತಿಲ್ಲ. ಈ ಎಲ್ಲಾ ಕಾರಣಗಳನ್ನು ರಾಜಕೀಯ ಪಕ್ಷಗಳು ಚನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. 

ಜಮ್ಮು ಮತ್ತು ಕಾಶ್ಮೀರದ ದಕ್ಷಿಣದಲ್ಲಿ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಅನಂತನಾಗ್ ರಜೌರಿ ಕ್ಷೇತ್ರದಿಂದ ಜಮ್ಮು ಮತ್ತು ಕಾಶ್ಮೀರ ಮಾಜಿ ಮಖ್ಯಮಂತ್ರಿ , ಪಿಡಿಪಿ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಸ್ಪರ್ಧಿಸುತ್ತಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಅಭ್ಯರ್ಥಿ ಮಿಯಾನ್ ಅಲ್ತಾಫ್ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪ್ರಮುಖ ಅಭ್ಯರ್ಥಿಯಾಗಿದ್ದಾರೆ. 

ಇದೇ ಕ್ಷೇತ್ರದಿಂದ ಹೊಸ ಪಕ್ಷ ಸ್ಥಾಪಿಸಿರುವ ಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್‌ ಸ್ಪರ್ಧೆ ಘೋಷಿಸಿದ್ದರು. ಆದರೆ ದಿಢೀರ್ ತಮ್ಮ ನಿರ್ಧಾರ ಬದಲಿಸಿದ್ದರು. ಇಷ್ಟೇ ಅಲ್ಲ ಲೋಕಸಭಾ ಚುನಾವಣೆಯ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಾಗಿ ಘೋಷಿಸಿದ್ದರು. ಗುಲಾಂ ನಬಿ ಸ್ಪರ್ಧೆಯಿಂದ ಹಿಂದೆ ಸರಿಯುವುದರೊಂದಿಗೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಹಾದಿ ಚುನಾವಣೆಯಲ್ಲಿ ಬಹುತೇಕ ಸುಗಮಗೊಂಡಂತಾಗಿದೆ.

Lok Sabha Elections 2024: ಇಂದು ತಪ್ಪದೇ ಮತ ಹಾಕಿ: ನಿರ್ಭಿತಿ, ವಿವೇಚನೆಯಿಂದ ವೋಟು ಹಾಕುವುದು ಹೇಗೆ? 

ಪಕ್ಷದ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ತೆಗೆದುಕೊಂಡ ಹಿನ್ನೆಲೆಯಲ್ಲಿ ಗುಲಾಂ ನಬಿ ಆಜಾದ್‌ ಅನಂತನಾಗ್‌ ಕ್ಷೇತ್ರದಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದಾರೆ. ಅವರ ಬದಲಾಗಿ ನುರಿತ ವಕೀಲ ಮೊಹಮ್ಮದ್‌ ಸಲೀಂ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು.  
 

Follow Us:
Download App:
  • android
  • ios