Asianet Suvarna News Asianet Suvarna News

ಫೈವ್ ಸ್ಟಾರ್ ಕಲ್ಚರ್ ಬಿಡಿ, ಸರ್ಕಾರಿ ಆತಿಥ್ಯ ಬಳಸಿಕೊಳ್ಳಿ: ಸಚಿವರು, ಅಧಿಕಾರಿಗಳಿಗೆ ನರೇಂದ್ರ ಮೋದಿ ಖಡಕ್ ವಾರ್ನ್

ಸಚಿವರು, ಅಧಿಕಾರಿಗಳು ಪಂಚತಾರಾ ಹೋಟೆಲ್‌ಗಳಲ್ಲಿ ವಾಸ್ತವ್ಯ ಹೂಡುವ ಸಂಸ್ಕೃತಿಗೆ ಕಡಿವಾಣ ಹಾಕಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಖಡಕ್‌ ಸೂಚನೆ ನೀಡಿದ್ದಾರೆ.

Avoid 5 star hotels and PSU perks PM Narendra Modi to ministers

ನವದೆಹಲಿ(ಆ.20): ಸಚಿವರು, ಅಧಿಕಾರಿಗಳು ಪಂಚತಾರಾ ಹೋಟೆಲ್‌ಗಳಲ್ಲಿ ವಾಸ್ತವ್ಯ ಹೂಡುವ ಸಂಸ್ಕೃತಿಗೆ ಕಡಿವಾಣ ಹಾಕಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಖಡಕ್‌ ಸೂಚನೆ ನೀಡಿದ್ದಾರೆ.

ಇತ್ತೀಚಿಗೆ ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸಚಿವರಿಗೆ ಪ್ರತ್ಯೇಕವಾಗಿ ಪಾಠ ಮಾಡಿದ ಮೋದಿ, ಯಾವುದೇ ಕಾರಣಕ್ಕೂ ಪಂಚತಾರಾ ಹೋಟೆಲ್‌'ಗಳಲ್ಲಿ ವಾಸ್ತವ್ಯ ಹೂಡುವ ಪರಿಪಾಠ ಬೆಳೆಸಿಕೊಳ್ಳಬಾರದು. ಅದರಲ್ಲೂ ಅಧಿಕೃತ ಪ್ರವಾಸಗಳಿಗೆ ತೆರಳಿದಾಗ ಸರಕಾರಿ ಪ್ರವಾಸಿ ಮಂದಿರಗಳಲ್ಲಿ ಅಥವಾ ಸರಕಾರ ನೀಡುವ ಆತಿಥ್ಯವನ್ನೇ ಬಳಸಿಕೊಳ್ಳಬೇಕು ಎಂದು ಸೂಚಿಸಿದರು.

ಕೆಲವು ಅಧಿಕಾರಿಗಳು, ಸಚಿವರು ಫೈವ್‌ ಸ್ಟಾರ್‌ ಸಂಸ್ಕೃತಿಗೆ ಮಾರು ಹೋಗಿರುವ ಬಗ್ಗೆ ವರದಿಗಳು ಬಂದಿವೆ. ಇದಕ್ಕೆ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಲಾಭ ಪಡೆದುಕೊಳ್ಳುತ್ತಿದ್ದಾರೆ. ಇನ್ಮುಂದೆ ಈ ರೀತಿ ಆಗಬಾರದು ಎಂದು ಎಚ್ಚರಿಸಿದ್ದಾರೆ.

ಇನ್ನು ಎರಡು ವರ್ಷಗಳಲ್ಲಿ ಚುನಾವಣೆ ಬರುತ್ತಿದ್ದು, ಮಿತವ್ಯಯಕ್ಕೆ ಹೆಚ್ಚು ಒತ್ತು ನೀಡಬೇಕು. ಇದರಿಂದ ಭ್ರಷ್ಟಾಚಾರಕ್ಕೆ ನಿಯಂತ್ರಣ ಹೇರಿದಂತಾಗುತ್ತದೆ. ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಮುಕ್ತ ಆಡಳಿತವೇ ನಮ್ಮ ಗುರಿ, ಧ್ಯೇಯ ಆಗಿರಬೇಕು. ಅಲ್ಲದೇ ಹಗರಣ ಮುಕ್ತ ಸರ್ಕಾರ ಆಗಿರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಮೋದಿ ಖಡಕ್‌ ಸೂಚನೆ ನೀಡಿದ್ದಾರೆ.

Follow Us:
Download App:
  • android
  • ios