Asianet Suvarna News Asianet Suvarna News

ಬೆಂಗಳೂರು: ಮಾರುಕಟ್ಟೆ ಸ್ಥಳಾಂತರಕ್ಕೆ ವಿರೋಧ; ರಾಷ್ಟ್ರೀಯ ಹೆದ್ದಾರಿ ತಡೆದ ರೈತರು

ಯಶವಂತಪುರ ಮಾರುಕಟ್ಟೆಯನ್ನು ದಾಸನಪುರ ಮಾರುಕಟ್ಟೆಗೆ ಸ್ಥಳಾಂತರಿಸಿರುವ ಎಪಿಎಂಪಿ ಕ್ರಮ ಖಂಡಿಸಿ, ರೈತರು, ವರ್ತಕರು ಯಶವಂತಪುರದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ದಾಸನಪುರ ಮಾರುಕಟ್ಟೆಯಲ್ಲಿ ಯಾವುದೇ ಮೂಲಸೌಕರ್ಯಗಳಿಲ್ಲ.  ಹೀಗಾಗಿ ನಾವು ಅಲ್ಲಿಗೆ ಹೋಗಲ್ಲ . ಎರಡು ಮಾರುಕಟ್ಟೆಯಲ್ಲಿ ಈರುಳ್ಳಿ, ಆಲೂಗಡ್ಡೆ  ಮಾರಾಟವಾಗದೇ ರೈತರು ಕಂಗಾಲಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Farmers Block NH Over Shifting Market

ಬೆಂಗಳೂರು: ಯಶವಂತಪುರ ಮಾರುಕಟ್ಟೆಯನ್ನು ದಾಸನಪುರ ಮಾರುಕಟ್ಟೆಗೆ ಸ್ಥಳಾಂತರಿಸಿರುವ ಎಪಿಎಂಪಿ ಕ್ರಮ ಖಂಡಿಸಿ, ರೈತರು, ವರ್ತಕರು ಯಶವಂತಪುರದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

ದಾಸನಪುರ ಮಾರುಕಟ್ಟೆಯಲ್ಲಿ ಯಾವುದೇ ಮೂಲಸೌಕರ್ಯಗಳಿಲ್ಲ.  ಹೀಗಾಗಿ ನಾವು ಅಲ್ಲಿಗೆ ಹೋಗಲ್ಲ . ಎರಡು ಮಾರುಕಟ್ಟೆಯಲ್ಲಿ ಈರುಳ್ಳಿ, ಆಲೂಗಡ್ಡೆ  ಮಾರಾಟವಾಗದೇ ರೈತರು ಕಂಗಾಲಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ದಾಸನಪುರ ಮಾರುಕಟ್ಟೆಯಲ್ಲಿಯೂ ಈರುಳ್ಳಿ, ಆಲೂಗಡ್ಡೆ ಖರೀದಿಸುವುದಾಗಿ ಎಪಿಎಂಸಿ ಅಧಿಕಾರಿಗಳು ಹೇಳಿದರೂ, ಪ್ರತಿಭಟನಾಕಾರರು ಮಾತ್ರ ಜಗ್ಗಲಿಲ್ಲ. ನಂತರ ಸ್ಥಳಕ್ಕೆ ಆಗಮಿಸಿದ ಶಾಸಕ ಗೋಪಾಲಯ್ಯ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಸ್ಥಳಕ್ಕೆ ಪ್ರತಿಭಟನಾಕಾರರ ಜತೆ ಸಮಾಲೋಚನೆ ನಡೆಸಿದರು.

ನಂತರ ಶಾಸಕ ಗೋಪಾಲಯ್ಯ  2 ಗಂಟೆಯೊಳಗೆ ಸಮಸ್ಯೆ ಬಗೆಹರಿಸಲು ಗಡುವು ನೀಡಿದರು. ಇಲ್ಲದೇ ಇದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡಲಾಗುವುದು ಎಂದು ಶಾಸಕರು ಎಚ್ಚರಿಕೆ ನೀಡಿದ್ದಾರೆ. ಸಮಸ್ಯೆ ಬಗೆಹರಿಯದಿದ್ದರೆ ಮತ್ತೆ ಎಪಿಎಂಸಿ ಕಚೇರಿ ಎದುರು  ಪ್ರತಿಭಟನೆ ನಡೆಸಲು ರೈತರು ಸಿದ್ಧತೆ ನಡೆಸಿದ್ದಾರೆ.

Follow Us:
Download App:
  • android
  • ios