Asianet Suvarna News Asianet Suvarna News

ಮಸೂದ್‌'ನನ್ನು ಉಗ್ರರ ಪಟ್ಟಿಗೆ ಸೇರಿಸಿ: ಫ್ರಾನ್ಸ್​ ಮನವಿ

ಮಸೂದ್ ಅಜರ್‌'ನನ್ನು ಅಂತರರಾಷ್ಟ್ರೀಯ ಮಟ್ಟದ ಭಯೋತ್ಪಾದಕ ಎಂದು ಘೋಷಿಸಬೇಕೆಂಬ ಭಾರತದ ಪ್ರಸ್ತಾವಕ್ಕೆ  ಚೀನಾ ಅಡ್ಡಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಹೇಳಿಕೆ ಹೊರಬಿದ್ದಿದೆ.

France Appeals UN to include Masood Azhar in Terror Blacklist

ಪ್ಯಾರಿಸ್ (ಜ.16): ಜೈಷ್‌ ಎ ಮೊಹಮ್ಮದ್‌ ಮುಖ್ಯಸ್ಥ ಮಸೂದ್ ಅಜರ್‌'ನನ್ನು ಅಂತರರಾಷ್ಟ್ರೀಯ ಮಟ್ಟದ ಭಯೋತ್ಪಾದಕ ಎಂದು ಘೋಷಿಸಲು ವಿಶ್ವಸಂಸ್ಥೆಗೆ  ಫ್ರಾನ್ಸ್‌ ಮನವಿ ಮಾಡಿದೆ.

ಅಜರ್‌'ನನ್ನು ಅಂತರರಾಷ್ಟ್ರೀಯ ಮಟ್ಟದ ಭಯೋತ್ಪಾದಕ ಎಂದು ಘೋಷಿಸಬೇಕೆಂಬ ಭಾರತದ ಪ್ರಸ್ತಾವಕ್ಕೆ  ಚೀನಾ ಅಡ್ಡಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಹೇಳಿಕೆ ಹೊರಬಿದ್ದಿದೆ.

ಜೈಷ್‌ ಎ ಮೊಹಮ್ಮದ್‌ ಭಯೋತ್ಪಾದಕ ಸಂಘಟನೆ ‘ಈಗಾಗಲೇ ಸಮಿತಿಯ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಪಟ್ಟಿಯಲ್ಲಿದೆ. ಆದ್ದರಿಂದ ಭಾರತದ ಮನವಿಯಂತೆ ಅಜರ್‌ನನ್ನು ಅಂತರರಾಷ್ಟ್ರೀಯ ಮಟ್ಟದ ಭಯೋತ್ಪಾದಕ ಎಂದು ಘೋಷಿಸಲು ಸಾಕಷ್ಟು ಬಲವಾದ ವಾದಗಳಿವೆ’ ಎಂದು  ಫ್ರಾನ್ಸ್‌ ವಿದೇಶಾಂಗ ಸಚಿವ ಜೀನ್‌ ಮಾರ್ಕ್‌ ಆರ್ಯಾಲ್ಟ್‌ ತಿಳಿಸಿದ್ದಾರೆ.

Follow Us:
Download App:
  • android
  • ios