ಸಹೋದ್ಯೋಗಿಗಳ ಮೇಲಿನ ಹಲ್ಲೆ ಖಂಡಿಸಿ ವೈದ್ಯರ ಪ್ರತಿಭಟನೆ
news
By Suvarna Web Desk | 06:05 PM Monday, 20 March 2017

ಸರ್ಕಾರಿ ಆಸ್ಪತ್ರೆ ಮೇಲೆ ದಾಳಿ ಮತ್ತು ವೈದ್ಯರ ಮೇಲೆ ಸರಣಿ ಹಲ್ಲೆ ಖಂಡಿಸಿ ಮಹಾರಾಷ್ಟ್ರ ರಾಜ್ಯಾದ್ಯಂತ ವೈದ್ಯರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಿದರು. ಸುಮಾರು 4500 ವೈದ್ಯರು ಕೆಲಸಕ್ಕೆ ಗೈರು ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

ಮುಂಬೈ (ಮಾ.20): ಸರ್ಕಾರಿ ಆಸ್ಪತ್ರೆ ಮೇಲೆ ದಾಳಿ ಮತ್ತು ವೈದ್ಯರ ಮೇಲೆ ಸರಣಿ ಹಲ್ಲೆ ಖಂಡಿಸಿ ಮಹಾರಾಷ್ಟ್ರ ರಾಜ್ಯಾದ್ಯಂತ ವೈದ್ಯರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಿದರು. ಸುಮಾರು 4500 ವೈದ್ಯರು ಕೆಲಸಕ್ಕೆ ಗೈರು ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯರು, ಉಪನ್ಯಾಸಕರು, ಪ್ರೊಫೆಸರ್ ಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರೋಗಿಗಳ ಸೇವಾ ವಿಭಾಗದಲ್ಲಿ ಕೆಲವು ವೈದ್ಯರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದರು.

ಎಂಎಆರ್ ಡಿ ನಿಯೋಗ, ಮೆಡಿಕಲ್ ಕಾಲೇಜಿನ ಮುಖ್ಯಸ್ಥರು, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್  ಮೇಯರನ್ನು ಭೇಟಿ ಮಾಡಿ ಭದ್ರತೆಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು. ಕೆಲವು ಆಸ್ಪತ್ರೆಗಳಲ್ಲಿ ಮಹಿಳಾ ಸೆಕ್ಯೂರಿಟಿ ಗಾರ್ಡ್ ಗಳಿದ್ದಾರೆ. ರೋಗಿಗಳ ಸಂಬಂಧಿಕರಿಂದ ಪರಿಸ್ಥಿತಿ ಕೈ ಮೀರಿದಾಗ ಅದನ್ನು ಮಹಿಳೆಯರಿಂದ ನಿಯಂತ್ರಿಸಲು ಸಾಧ್ಯವಾಗದು ಎಂದು ವೈದ್ಯರು ಹೇಳಿದ್ದಾರೆ.

Show Full Article