Asianet Suvarna News Asianet Suvarna News

ಪೊಲೀಸ್ ಪಡೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಕೇವಲ ಶೇ.7!

ಜನವರಿ 1, 2016ರವೆರೆಗಿನ ಅಂಕಿ-ಅಂಶಗಳ ಪ್ರಕಾರ ದೇಶದ ಪೊಲೀಸ್ ಪಡೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಶೇ.7.10 ಆಗಿದೆಯೆಂದು ಗೃಹ ಇಲಾಖೆಯ ರಾಜ್ಯ ಸಚಿವ ಹಂಸರಾಜ್ ಜಿ. ಆಹಿರ್ ಇಂದು ಲೋಕಸಭೆಯಲ್ಲಿ ತಿಳಿಸಿದ್ದಾರೆ.

Women constitute about 7 per cent in police forces

ನವದೆಹಲಿ (ಮಾ.28): ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳಲ್ಲಿ ಮಹಿಳೆಯರ ಪ್ರಮಾಣ ಕೇವಲ ಶೇ.7ರಷ್ಟಿದೆಯೆಂದು ಕೇಂದ್ರ ಸರ್ಕಾರ ಹೇಳಿದೆ.

ಜನವರಿ 1, 2016ರವೆರೆಗಿನ ಅಂಕಿ-ಅಂಶಗಳ ಪ್ರಕಾರ ದೇಶದ ಪೊಲೀಸ್ ಪಡೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಶೇ.7.10 ಆಗಿದೆಯೆಂದು ಗೃಹ ಇಲಾಖೆಯ ರಾಜ್ಯ ಸಚಿವ ಹಂಸರಾಜ್ ಜಿ. ಆಹಿರ್ ಇಂದು ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಪೊಲೀಸ್ ಪಡೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಶೇ.33ಕ್ಕೆ ಹೆಚ್ಚಿಸಲು ರಾಜ್ಯಗಳಿಗೆ 2009 ಹಾಗೂ 2012ರಲ್ಲಿ ಸೂಚಿಸಲಾಗಿದೆಯೆಂದು ಅವರು ಹೇಳಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಪುರುಷ ಪೇದೆ ಹಾಗೂ ಸಬ್-ಇನ್'ಸ್ಪೆಕ್ಟರ್ ಗಳ ಹುದ್ದೆಯನ್ನು ಮಹಿಳೆಯರಿಗೆ ನೀಡುವಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕರಗಳಿಗೆ ಸೂಚಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

2011 ಜನಗಣತಿ ಪ್ರಕಾರ ಭಾರತದಲ್ಲಿ ಶೇ. ಮಹಿಳೆಯರ ಜನಸಂಖ್ಯೆ ಪ್ರಮಾಣ ಶೇ.48.5 ಆಗಿದೆ.

Follow Us:
Download App:
  • android
  • ios