Asianet Suvarna News Asianet Suvarna News

ಡಿ.ಕೆ.ಶಿವಕುಮಾರ್ ಸಿಎಂ ಆಗುವುದು ನಿಶ್ಚಿತ: ಕಲ್ಮನೆ ಸುರೇಶ್

ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಕಲ್ಮನೆ ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು.

DK Shivakumar is sure to become CM Says Kalmane Suresh gvd
Author
First Published May 19, 2024, 4:54 PM IST

ಶಿಕಾರಿಪುರ (ಮೇ.19): ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಪಡೆದು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಐಎನ್‌ಡಿಐಎ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಕಲ್ಮನೆ ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಹಿತ್ತಲ ಗ್ರಾಮದಲ್ಲಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಸಿದ್ದೇಶ್ವರ ದೇವಸ್ಥಾನ ಬಳಿ ಡಿಸಿಎಂ ಡಿ.ಕೆ.ಶಿವಕುಮಾರ್ 64ನೇ ಹುಟ್ಟುಹಬ್ಬ ಅಂಗವಾಗಿ ಪಿಯುಸಿ, ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾಗ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಚುಕ್ಕಾಣಿ ಹಿಡಿದ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅದೇ ರೀತಿ ಲೋಕಸಭೆ ಹಾಗೂ ಜಿ.ಪಂ, ತಾ.ಪಂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು.

ಆರ್.ಮೋಹನ್ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘ ಸ್ಥಾಪಿಸಿ ಅವರ ಕೀರ್ತಿ ಹೆಚ್ಚಿಸಿ, ಸಮಾಜ ಸೇವಾ ಕಾರ್ಯಗಳ ನಡೆಸುತ್ತ ಬರುತ್ತಿದ್ದಾರೆ. ಕ್ರಿಯಾಶೀಲ ವ್ಯಕ್ತಿತ್ವದ ಮೋಹನ್ ಉತ್ತಮ ನಾಯಕತ್ವದ ಗುಣ ಹೊಂದಿದ್ದು ಅವರಿಗೆ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ದೊರೆಯುವಂತಾಗಲಿ ಎಂದು ಹಾರೈಸಿದರು. ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಗೀತಾ ಗೆಲುವು ಗ್ಯಾರಂಟಿ. ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ಫಲಿತಾಂಶದ ಮೂಲಕ ಪ್ರತಿಫಲ ಸಿಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನಂತರ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.ಹುಟ್ಟುಹಬ್ಬ ನೆನಪಿಗೆ ಶ್ರೀಗಂಧದ ಸಸಿಗಳ ನೆಡುವಿಕೆ:

ಅಂತರ್ಜಲ ಕುಸಿತ: ನೀರಿಲ್ಲದೇ ನದಿಗಳ ಒಡಲು ಖಾಲಿ ಖಾಲಿ!

ಈ ವೇಳೆ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ, ಕೆಪಿಸಿಸಿ ಸಂಯೋಜಕ ಆರ್.ಮೋಹನ್, ಪುರಸಬಾ ಸದಸ್ಯ ಮಯೂರ್ ದರ್ಶನ್‌ ಉಳ್ಳಿ, ರಾಘವೇಂದ್ರ ನಾಯ್ಕ, ವೀರೇಶ್ ಜೋಗಿಹಳ್ಳಿ, ಗಜೇಂದ್ರಪ್ಪ, ರುದ್ರೇಗೌಡ,ಅರಿಶಿಣಗೆರಿ ಶೋಭಾ, ಭಂಡಾರಿ ಮಾಲತೇಶ್, ಚಿಕ್ಕಮರಡಿ ಗಣೇಶ್, ಛಲವಾದಿ ಸಮಾಜದ ಜಿಲ್ಲಾಧ್ಯಕ್ಷ ಸಿದ್ದಪ್ಪ ಮತ್ತಿತರರಿದ್ದರು. ಕನ್ನಡದಲ್ಲಿ ಶೇ.100 ಅಂಕಗಳಿದ ಮೋನಿಕಾ ಕಲ್ಮನೆ ಸೇರಿ ಪಿಯುಸಿ, ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನಿಸಿಲಾಯಿತು ಹಾಗೂ ಡಿ.ಕೆ.ಶಿವಕುಮಾರ್ ಜನ್ಮದಿನಾಚರಣೆ ಸವಿ ನೆನಪಿಗಾಗಿ ಹಿತ್ತಲ ಗ್ರಾಮದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀಗಂಧದ ಸಸಿಗಳ ನೆಡಲಾಯಿತು.

Latest Videos
Follow Us:
Download App:
  • android
  • ios