Asianet Suvarna News Asianet Suvarna News

Lok Sabha Elections 2024: ಮೊದಲ ಹಂತದ ಚುನಾವಣೆ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಮೊದಲ ಹಂತದ ಚುನಾವಣೆಗಳು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಂತೆ ಒಟ್ಟು 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಜೂ.4ರಂದು ಎಲ್ಲಾ 7 ಹಂತದ ಚುನಾವಣೆ ಮುಗಿದ ಬಳಿಕ ಒಟ್ಟಿಗೆ ಫಲಿತಾಂಶ ಪ್ರಕಟವಾಗಲಿದೆ.

First Phase of Lok Sabha Elections 2024 Open Campaign End on April 17th grg
Author
First Published Apr 17, 2024, 7:41 AM IST

ನವದೆಹಲಿ(ಏ.17):  ಏ.19ರಂದು ಲೋಕಸಭೆಗೆ ನಡೆಯುವ ಮೊದಲ ಹಂತದ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಇಂದು(ಬುಧವಾರ) ತೆರೆ ಬೀಳಲಿದೆ. ಶುಕ್ರವಾರ ಮತದಾನ ನಡೆಯಲಿದ್ದು, ಗುರುವಾರ ಸಂಜೆವರೆಗೆ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಮನೆಮನೆಗೆ ತೆರಳಿ ಪ್ರಚಾರ ನಡೆಸಬಹುದಾಗಿರುತ್ತದೆ. ಈ ಮೊದಲ ಹಂತದ ಚುನಾವಣೆಗಳು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಂತೆ ಒಟ್ಟು 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಜೂ.4ರಂದು ಎಲ್ಲಾ 7 ಹಂತದ ಚುನಾವಣೆ ಮುಗಿದ ಬಳಿಕ ಒಟ್ಟಿಗೆ ಫಲಿತಾಂಶ ಪ್ರಕಟವಾಗಲಿದೆ.

ಮೊದಲ ಹಂತದ ಚುನಾವಣೆಗೆ 20 ರಾಜ್ಯಗಳಲ್ಲಿ ಮಾ.20 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಾ.27ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು, ಆದರೆ ಬಿಹಾರದಲ್ಲಿ ಮಾ.28ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

VVPAT ಅರ್ಜಿ ವಿಚಾರಣೆ, ಬ್ಯಾಲೆಟ್ ಮತದಾನದಲ್ಲಿ ಏನಾಗಿದೆ ಅನ್ನೋದು ಮರೆತಿಲ್ಲ ಎಂದ ಸುಪ್ರೀಂ ಕೋರ್ಟ್!

ಅರುಣಾಚಲ ಪ್ರದೇಶ, ಅಸ್ಸಾಂ, ಆಂಧ್ರಪ್ರದೇಶ, ಬಿಹಾರ, ಛತ್ತೀಸ್‌ಗಢ, ಮೇಘಾಲಯ, ಮಹಾರಾಷ್ಟ್ರ, ಮಧ್ಯಪ್ರದೇಶ್‌, ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತ್ರಿಪುರಾ, ಉತ್ತರಾಖಂಡ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪುದುಚೇರಿಯಲ್ಲಿಯ 102 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.

ಪ್ರಮುಖವಾಗಿ ತೆಲಂಗಾಣ ರಾಜ್ಯಪಾಲರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ರಾಜ್ಯಪಾಲೆ ತಮಿಳ್‌ಸಾಯಿ ಸೌಂದರರಾಜನ್‌ ಚೆನ್ನೈ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಕೊಯಮತ್ತೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

Follow Us:
Download App:
  • android
  • ios