Asianet Suvarna News Asianet Suvarna News

ಅಕ್ಷಯ್ ಕುಮಾರ್-ಟೈಗರ್ ಶ್ರಾಫ್ ಪವರ್ ಪ್ಯಾಕ್ಡ್ 'ಬಡೆ ಮಿಯಾನ್ ಚೋಟೆ ಮಿಯಾನ್' ಟ್ರೇಲರ್ ರಿಲೀಸ್

ಬಡೆ ಮಿಯಾನ್ ಚೋಟೆ ಮಿಯಾನ್ ಟ್ರೇಲರ್ ನಲ್ಲಿ ಮೈ ಜುಮ್ ಎನಿಸುವ ಹೈ ಆಕ್ಷನ್ ಸೀಕ್ವೆನ್ಸ್ ಹೈಲೆಟ್ ಆಗಿವೆ. ದೇಶಭಕ್ತಿ ಉಕ್ಕಿಸುವ ಈ ಝಲಕ್ ನಲ್ಲಿ ಕಿಲಾಡಿ ಟೈಗರ್ ಜುಗಲ್ ಬಂಧಿ ನೋಡುಗರಿಗೆ ಸಖತ್ ಕಿಕ್ ಕೊಡಲಿದೆ.

Akshay Kumar and Tiger Shroff lead Bade miyan chote miyan movie trailer release srb
Author
First Published Mar 28, 2024, 6:28 PM IST

ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ (Akshay Kumar)  ಹಾಗೂ ಟೈಗರ್ ಶ್ರಾಫ್ (Tiger Shroff)) ನಟನೆಯ 'ಬಡೆ ಮಿಯಾನ್ ಚೋಟೆ ಮಿಯಾನ್' (Bade miyan chote miyan) ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಮೊದಲ ನೋಟ ಅನಾವರಣಗೊಂಡಿದೆ. 3 ನಿಮಿಷ 3 ಸೆಕೆಂಡ್ ಇರುವ ಪವರ್ ಪ್ಯಾಕ್ಡ್ ಟ್ರೇಲರ್ ನಲ್ಲಿ ಅಕ್ಷಯ್ ಹಾಗೂ ಟೈಗರ್ ಭರ್ಜರಿ ಆಕ್ಷನ್ ಮೂಲಕ ಅಬ್ಬರಿಸಿದ್ದಾರೆ. 

ಬಡೆ ಮಿಯಾನ್ ಚೋಟೆ ಮಿಯಾನ್ ಟ್ರೇಲರ್ ನಲ್ಲಿ ಮೈ ಜುಮ್ ಎನಿಸುವ ಹೈ ಆಕ್ಷನ್ ಸೀಕ್ವೆನ್ಸ್ ಹೈಲೆಟ್ ಆಗಿವೆ. ದೇಶಭಕ್ತಿ ಉಕ್ಕಿಸುವ ಈ ಝಲಕ್ ನಲ್ಲಿ ಕಿಲಾಡಿ ಟೈಗರ್ ಜುಗಲ್ ಬಂಧಿ ನೋಡುಗರಿಗೆ ಸಖತ್ ಕಿಕ್ ಕೊಡಲಿದೆ. ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದು, ಆದ್ರೆ ಟ್ರೇಲರ್ ನಲ್ಲಿ ಅವರ ಮುಖವನ್ನೇ ರಿವೀಲ್ ಮಾಡದೇ ಚಿತ್ರತಂಡ ಸೀಕ್ರೆಟ್ ಕಾಯ್ದುಗೊಂಡಿದೆ. ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. 

ಕ್ರೇಜಿಸ್ಟಾರ್ ಪುತ್ರನಿಗೆ ಸಲಗ ಸುಂದರಿ ನಾಯಕಿ, ವಿಕ್ರಮ್ 'ಮುಧೋಳ್' ಬಳಗ ಸೇರಿದ ಸಂಜನಾ ಆನಂದ್!

ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಹಾಲಿವುಡ್ ರೇಂಜ್ಗೆ ಬಿಗ್ ಬಜೆಟ್ನಲ್ಲಿ 'ಬಡೇ ಮಿಯಾನ್ ಚೋಟೆ ಮಿಯಾನ್' ಅನ್ನು ನಿರ್ಮಿಸಲಾಗಿದೆ. ಟೈಗರ್ ಜಿಂದಾ ಹೈ, ಸುಲ್ತಾನ್ ಸಿನಿಮಾಗಳನ್ನು ನಿರ್ದೇಶಿಸಿರುವ ಅಲಿ ಅಬ್ಬಾಸ್ ಜಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಮತ್ತೆ ಒಂದಾಯ್ತು 'ರಂಗಸ್ಥಳಂ' ಜೋಡಿ, ಬರಲಿದೆ ರಾಮ್ ಚರಣ್-ಸುಕುಮಾರ್ ಸಂಗಮದ ಮತ್ತೊಂದು ಸಿನಿಮಾ! 

ವಶು ಭಗ್ನಾನಿ, ದೀಪಿಕ್ಷಾ ದೇಶ್ಮುಖ್, ಜಾಕಿ ಭಗ್ನಾನಿ, ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ವಶು ಭಗ್ನಾನಿ ಮತ್ತು ಪೂಜಾ ಎಂಟರ್ಟೈನ್ಮೆಂಟ್ ಎಎಝೆಡ್ ಫಿಲ್ಮ್ಸ್ ಸಹಯೋಗದಡಿ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. 2024ರ ಏಪ್ರಿಲ್ - ಈದ್ ಸಂದರ್ಭ ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಧೀಮಂತ ನಟಿಯಾಗುವ ಕನಸು ನನಸು ಮಾಡಲು ಬರುತ್ತಿದೆ ಜೀ ಕನ್ನಡದ 'ಮಹಾನಟಿ' ಶೋ!

Follow Us:
Download App:
  • android
  • ios