ಕುಂಬ್ಳೆ ಕೋಚ್ ಆಗಿ ಮುಂದುವರೆಯುವುದು ಕೊಹ್ಲಿಗೆ ಸ್ವಲ್ಪವೂ ಇಷ್ಟವಿಲ್ಲ..!
sports
By Suvarna Web Desk | 09:19 PM June 19, 2017

ಈಗಾಗಲೇ ಕುಂಬ್ಳೆ, ವಿರೇಂದ್ರ ಸೆಹ್ವಾಗ್, ಟಾಮ್ ಮೂಡಿ ಸೇರಿದಂತೆ ಒಟ್ಟು 6 ಮಂದಿ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ(ಜೂ.19): ಭಾರತ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಅವರನ್ನು ಮುಂದುವರಿಸುವುದು ನಾಯಕ ವಿರಾಟ್ ಕೊಹ್ಲಿಗೆ ಇಷ್ಟವಿಲ್ಲ. ಇಬ್ಬರ ನಡುವಿನ ಸಂಬಂಧ ಸರಿಪಡಿಸಲು ಸಾಧ್ಯವಾಗದಷ್ಟು ಹದಗೆಟ್ಟಿದೆ ಎಂದು ‘ ದ ಡೈಲಿ ಟೆಲಿಗ್ರಾಫ್’ ಪತ್ರಿಕೆ ವರದಿ ಮಾಡಿದೆ.

ಇವರಿಬ್ಬರ ನಡುವೆ ಸಂಧಾನ ನಡೆಸಲು ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ ಸಕಲ ಪ್ರಯತ್ನ ನಡೆಸುತ್ತಿದ್ದು, ವಿರಾಟ್ ಕೊಹ್ಲಿ ಜತೆ ಸಭೆ ನಡೆಸಲಾಯಿತು ಎನ್ನಲಾಗಿದ್ದು, ಈ ವೇಳೆ ಕೊಹ್ಲಿ ಕುಂಬ್ಳೆ ಮುಂದುವರಿಯುವುದು ತಮಗಂತೂ ಇಷ್ಟವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕ್ರಿಕೆಟ್ ಸಲಹಾ ಸಮಿತಿ ಸದಸ್ಯರು ಹಾಗೂ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಸದ್ಯದಲ್ಲೇ ಕುಂಬ್ಳೆ ಅವರನ್ನು ಭೇಟಿ ಮಾಡಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.

ಇದೇವೇಳೆ ತಂಡದ ಮಾಜಿ ನಿರ್ದೇಶಕ ರವಿಶಾಸ್ತ್ರಿ ಅವರನ್ನು ಟೀಂ ಇಂಡಿಯಾ ಕೋಚ್ ಮಾಡಲು ನಾಯಕ ವಿರಾಟ್ ಕೊಹ್ಲಿ ಒಲವು ಹೊಂದಿದ್ದಾರೆ ಎನ್ನಲಾಗುತ್ತಿದೆ. ಪ್ರಸ್ತುತ ವೆಸ್ಟ್'ಇಂಡಿಸ್ ಸರಣಿವರೆಗೆ ಕುಂಬ್ಳೆ ಅವರನ್ನೇ ಮುಂದುವರೆಸಲು ಕ್ರಿಕೆಟ್ ಸಲಹಾ ಸಮಿತಿ ತೀರ್ಮಾನಿದೆ. ಕೆರಿಬಿಯನ್ ಪ್ರವಾಸದ ಬಳಿಕ ನೂತನ ಕೋಚ್ ಆಯ್ಕೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಕುಂಬ್ಳೆ, ವಿರೇಂದ್ರ ಸೆಹ್ವಾಗ್, ಟಾಮ್ ಮೂಡಿ ಸೇರಿದಂತೆ ಒಟ್ಟು 6 ಮಂದಿ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.

Show Full Article