Asianet Suvarna News Asianet Suvarna News

ಮಹಿಳೆಯರಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುವ ಅಪಾಯಕಾರಿ ಅಂಶಗಳಿವು

ಇತ್ತೀಚಿನ ವರ್ಷಗಳಲ್ಲಿ ಪುರುಷರು, ಮಹಿಳೆಯರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲರೂ ಹಾರ್ಟ್‌ಅಟ್ಯಾಕ್‌ನಿಂದ ಸಾವನ್ನಪ್ಪುತ್ತಿದ್ದಾರೆ. ಆದ್ರೆ ಮಹಿಳೆಯರಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುವ ಅಪಾಯಕಾರಿ ಅಂಶಗಳು ಯಾವುವು ನಿಮ್ಗೆ ಗೊತ್ತಿದ್ಯಾ?

Risk factors that increase the possibility of heart attack in women Vin
Author
First Published May 9, 2024, 9:22 AM IST

ಹಿಂದಿನ ಕಾಲದಲ್ಲಿ ವೃದ್ಧಾಪ್ಯದವರು ಹೆಚ್ಚಾಗಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಯುವಜನತೆಯಲ್ಲಿ ಹೃದಯಾಘಾತದ ಪ್ರಮಾಣ ಹೆಚ್ಚಾಗ್ತಿದೆ. ಪುರುಷರು, ಮಹಿಳೆಯರು, ಹಿರಿಯರು, ಕಿರಿಯರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲರೂ ಹಾರ್ಟ್‌ಅಟ್ಯಾಕ್‌ನಿಂದ ಸಾವನ್ನಪ್ಪುತ್ತಿದ್ದಾರೆ. ಜೀವನಶೈಲಿ ಹೆಚ್ಚಾಗಿ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅತಿಯಾದ ಒತ್ತಡ, ವ್ಯಾಯಾಮ ಮಾಡದಿರುವ ಅಭ್ಯಾಸ, ಕೆಟ್ಟ ಆಹಾರಕ್ರಮ ಆರೋಗ್ಯವನ್ನು ಹದಗೆಡಿಸುತ್ತದೆ. ಆದ್ರೆ ಮಹಿಳೆಯರಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುವ ಅಪಾಯಕಾರಿ ಅಂಶಗಳು ಯಾವುವು ನಿಮ್ಗೆ ಗೊತ್ತಿದ್ಯಾ?

ಹೃದಯಾಘಾತದ ನೋವು ಸಾಮಾನ್ಯವಾಗಿ ಎದೆಯ ಮಧ್ಯಭಾಗದಲ್ಲಿ ಕಂಡುಬರುತ್ತದೆ. ನೋವು ಎಡ ಎದೆಯಿಂದ ಪ್ರಾರಂಭವಾಗಬಹುದು ಮತ್ತು ಅಲ್ಲಿಂದ ಕತ್ತಿನ ಮಧ್ಯಕ್ಕೆ ಎಡ ಭುಜ, ಎಡಗೈ ಅಥವಾ ಗಲ್ಲದ ಮೂಳೆಗೆ ಮಾತ್ರ ಚಲಿಸಬಹುದು. ಬೆವರುವುದು, ತೀವ್ರ ಆಯಾಸ, ಉಸಿರಾಟದ ತೊಂದರೆ ಮತ್ತು ವಾಕರಿಕೆ ಹೃದಯಾಘಾತದ ಇತರ ಆರಂಭಿಕ ಚಿಹ್ನೆಗಳು. ಮಹಿಳೆಯರಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುವ ಕೆಲವು ಅಂಶಗಳು ಯಾವುವು ತಿಳಿಯೋಣ.

ಪಿಸಿಒಎಸ್ ಸಮಸ್ಯೆ ಇರೋ ಮಹಿಳೆಗೆ ಹೃದಯಾಘಾತ ಅಪಾಯ ಹೆಚ್ಚು! ಈ ಎಚ್ಚರಿಕೆ ಇರಲಿ..

ಪರಿಧಮನಿಯ ಕಾಯಿಲೆ (ಸಿಎಡಿ) ಹೃದಯ ಸ್ನಾಯುಗಳಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್‌ನಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಹೀಗಾಗಿ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಆರೋಗ್ಯಯುತ ಆಹಾರವನ್ನಷ್ಟೇ ಸೇವಿಸಬೇಕು.

ಅಧಿಕ ರಕ್ತದೊತ್ತಡವು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಅಧಿಕ ರಕ್ತದೊತ್ತಡವನ್ನು ಸಮಯಕ್ಕೆ ಸರಿಯಾಗಿ ಪತ್ತೆಹಚ್ಚದಿದ್ದರೆ ಮತ್ತು ಚಿಕಿತ್ಸೆ ನೀಡದಿದ್ದರೆ ಇದು ಹೃದಯಾಘಾತ, ಪಾರ್ಶ್ವವಾಯು ಮತ್ತು ಅಪಧಮನಿಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು. ಆದ್ದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡುವ ವಿಧಾನಗಳನ್ನು ಅಳವಡಿಸಿಕೊಳ್ಳಿ. 

ಮಧ್ಯಾಹ್ನ 2 ಗಂಟೆ ಬಳಿಕ ನೀವೆಷ್ಟು ಕಾಫಿ, ಟೀ ಕುಡಿತೀರಿ? ಹಾರ್ಟ್ ಆಟ್ಯಾಕ್ ಆಗದಂತೆ ಇರಲಿ ಎಚ್ಚರ!

ಮಧುಮೇಹ ಸಹ ಹೃದಯದ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಹೃದ್ರೋಗವು 65 ವರ್ಷಕ್ಕಿಂತ ಮೇಲ್ಪಟ್ಟ ಮಧುಮೇಹ ಹೊಂದಿರುವ 68% ಜನರನ್ನು ಕೊಲ್ಲುತ್ತದೆ. ಕೆಲವು ಜೀವನಶೈಲಿ ಬದಲಾವಣೆಯಿಂದ ಮಧುಮೇಹವನ್ನು ನಿಯಂತ್ರಿಸಬಹುದು. ಅಧಿಕ ತೂಕವು ಅಧಿಕ ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಹೃದಯಾಘಾತಕ್ಕೆ ಕಾರಣವಾಗಬಹುದು. ಆದ್ದರಿಂದ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಬೇಕು. 

ಧೂಮಪಾನಿಗಳಿಗೆ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚು. ಧೂಮಪಾನವು ಹೃದಯಕ್ಕೆ ಆಮ್ಲಜನಕದ ವಿತರಣೆಯನ್ನು ಕಡಿಮೆ ಮಾಡುತ್ತದೆ, ರಕ್ತದೊತ್ತಡವನ್ನು ಹೆಚ್ಚಿಸುತ್ತದೆ, ರಕ್ತನಾಳಗಳನ್ನು ಹಾನಿಗೊಳಿಸುತ್ತದೆ ಮತ್ತು ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಧೂಮಪಾನವನ್ನು ತ್ಯಜಿಸುವುದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. 

ಒತ್ತಡವು ಹೃದಯಾಘಾತದ ಅಪಾಯವನ್ನು ಸಹ ಹೆಚ್ಚಿಸುತ್ತದೆ. ಆದ್ದರಿಂದ ಒತ್ತಡವನ್ನು ನಿರ್ವಹಿಸುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಬಹುದು. ವ್ಯಾಯಾಮದ ಕೊರತೆಯೂ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಇದರಿಂದ ಎಷ್ಟೇ ಬಿಝಿಯಾಗಿದ್ದರೂ ನಿರ್ಧಿಷ್ಟವಾಗಿ ಕೆಲ ಸಮಯಗಳ ಕಾಲ ವ್ಯಾಯಾಮ ಮಾಡಲು ಪ್ರಯತ್ನಿಸಬೇಕು. ಋತುಬಂಧ, ಗರ್ಭಧಾರಣೆ ಮತ್ತು ಹಾರ್ಮೋನ್ ಚಿಕಿತ್ಸೆಗೆ ಸಂಬಂಧಿಸಿದ ಹಾರ್ಮೋನ್ ಬದಲಾವಣೆಗಳು ಸಹ ಮಹಿಳೆಯರಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು. 

Follow Us:
Download App:
  • android
  • ios